ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಕಿರಿಯ ಸಹಾಯಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿಗಳು ಮತ್ತು ನೌಕರರ ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 2021ರ ರೀತ್ಯಾ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಿವಿಧ ವೃಂದಗಳ ಹುದ್ದೆಗಳಿಗೆಅಧಿಸೂಚನೆಯನ್ನು ದಿನಾಂಕ:12.03.2024ರಂದು ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯಲ್ಲಿನ ಕ್ರಮ ಸಂಖ್ಯೆ:06ರಲ್ಲಿನ ಕಿರಿಯ ಸಹಾಯಕರ ಉಳಿಕೆ ವೃಂದದ ಹುದ್ದೆಗಳ ಕುರಿತಂತೆ ಈ ಕೆಳಕಂಡಂತೆ ಓದಿಕೊಳ್ಳತಕ್ಕದ್ದು.
ಹುದ್ದೆಯ ಹೆಸರು: ಕಿರಿಯ ಸಹಾಯಕರು-07 ಹುದ್ದೆಗಳು
ಹುದ್ದೆಗಳ ಸಂಖ್ಯೆ: ಉಳಿಕೆ ಮೂಲ ವೃಂದ 06 ಹುದ್ದೆಗಳು, ಕಲ್ಯಾಣ ಕರ್ನಾಟಕ 01 ಹುದ್ದೆ
ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಪರಿಷ್ಕೃತ ದಿನಾಂಕವು ಈ ಕೆಳಕಂಡಂತಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ
04.12.2024.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
03.01.2025.
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ
04.01.2025.
ದಿನಾಂಕ:12.03.2024ರ ಅಧಿಸೂಚನೆಯ ಕ್ರಮ ಸಂಖ್ಯೆ:3(1)ರಲ್ಲಿನ ವಯೋಮಿತಿ ಸಡಿಲಿಕೆ ಕೋಷ್ಠಕದಲ್ಲಿ ನಮೂದಿಸಿರುವ “ಗರಿಷ್ಠ ವಯೋಮಿತಿಗೆ 02 ವರ್ಷಗಳ ಸಡಿಲಿಕೆ ನೀಡಲಾಗಿದೆ” ಎಂಬುದರ ಬದಲಾಗಿ “03 ವರ್ಷಗಳ ಸಡಿಲಿಕೆ ನೀಡಲಾಗಿದೆ” ಎಂಬುದಾಗಿ ಓದಿಕೊಳ್ಳತಕ್ಕದ್ದು.
• ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ:12.03.2024ರ ಅಧಿಸೂಚನೆಯಲ್ಲಿ ನಿಗಧಿಪಡಿಸಿರುವ ಎಲ್ಲಾ ಅರ್ಹತೆ, ಸೂಚನೆ, ನಿಬಂಧನೆ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುದನ್ನು ಅಭ್ಯರ್ಥಿಗಳು ಗಮನಿಸಬಹುದಾಗಿದೆ.