ಬೆಂಗಳೂರು: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ʻಪ್ರೋತ್ಸಾಹಧನʼ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ಆದೇಶದಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿನಾಂಕ:22.03.2012ರ ಪೂರ್ವದಲ್ಲಿ ನೇಮಕಾತಿ ಹೊಂದಿರುವ ಹಾಗೂ ದಿನಾಂಕ:17.04.2021ರೊಳಗೆ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರು ಹಾಜರುಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷಾ ಪ್ರಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಹಾಗೂ ಸದರಿ ಪ್ರೋತ್ಸಾಹ ಧನವನ್ನು ಸರ್ಕಾರಿ ನೌಕರರು ವೇತನ ಪಡೆಯುವ ಲೆಕ್ಕಶೀರ್ಷಿಕೆಯಡಿಯಲ್ಲಿ ಭರಿಸಲು ಆದೇಶಿಸಲಾಗಿರುತ್ತದೆ.
ಅದರಂತೆ ಕ್ರಮಾಂಕ(02) ಸರ್ಕಾರದ ಅನುದಾನ ಬಿಡುಗಡೆ ಆದೇಶದಲ್ಲಿ ಉನ್ನತ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತಿರ್ಣರಾದವರಿಗೆ ಪ್ರೋತ್ಸಾಹಧನವನ್ನು ಪಾವತಿಸಲು 2023-24 ಸಾಲಿನ ಆಯವ್ಯಯ ಲೆಕ್ಕ ಶೀರ್ಷಿಕೆ 2202-03-103-2-01 ಇತರೆ ಸರ್ಕಾರಿ ಕಾಲೇಜುಗಳು 051 ಸಾಮಾನ್ಯ ವೆಚ್ಚರಡಿ ರೂ.223.65/- ಲಕ್ಷಗಳು ಬಿಡುಗಡೆಯಾಗಿದ್ದು ಸದರಿ ಅನುದಾನದಲ್ಲಿ ರೂ.192.40/-(ಒಂದು ನೂರ ತೊಂಬತ್ತೆರಡು ಲಕ್ಷದ ನಲವತ್ತು ಸಾವಿರ ರೂಪಾಯಿಗಳು ಮಾತ್ರ)ಗಳನ್ನು ಮೊದಲನೇ ಕಂತಿನಲ್ಲಿ ಬಿಡುಗಡೆ ಮಾಡಲು ಈ ಕೆಳಕಂಡಂತೆ ಆದೇಶಿಸಲಾಗಿದೆ
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖಾ ವ್ಯಾಪ್ತಿಯ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ದಿನಾಂಕ:22.03.2012 ರಂದು ಸೇವೆಯಲ್ಲಿದ್ದು, ದಿನಾಂಕ:17.04.2021ರೊಳಗೆ ಸದರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾನಿರತ ಸರ್ಕಾರಿ ನೌಕರರುಗಳಿಗೆ ಪ್ರೋತ್ಸಾಹ ಧನವನ್ನು ಪಾವತಿಸಲು 2023-24ನೇ ಸಾಲಿನ ಇತರೆ ಸರ್ಕಾರಿ ಕಾಲೇಜುಗಳ ಆಯವ್ಯಯ ಲೆಕ್ಕ ಶೀರ್ಷಿಕೆ : 2202-03-103-2-01-051-ಸಾಮಾನ್ಯ ವೆಚ್ಚಗಳು ಅಡಿಯಲ್ಲಿ ರೂ.192.40/- (ಒಂದು ನೂರ ತೊಂಬತ್ತೆರಡು ಲಕ್ಷದ ನಲವತ್ತು ಸಾವಿರ ರೂಪಾಯಿಗಳು ಮಾತ್ರ)ಗಳನ್ನು ಈ ಪತ್ರಕ್ಕೆ ಅಡಕಗೊಳಿಸಿರುವ ಅನುಬಂಧದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಈ ಕೆಳಕಂಡ ಷರತ್ತುಗಳನ್ವಯದಂತೆ ಅನುದಾನ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಿ ಆದೇಶಿಸಲಾಗಿದೆ.