alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 42,000 ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 42,000 ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(SSC) 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದು, ಮುಂದಿನ ಒಂದೆರಡು ತಿಂಗಳಲ್ಲಿ ವಿವಿಧ ಇಲಾಖೆಗಳಿಂದ ಈ ಪತ್ರಗಳನ್ನು ನೀಡಲಾಗುವುದು.

42,000 ನೇಮಕಾತಿಗಳನ್ನು ಡಿಸೆಂಬರ್ 2022 ರ ಮೊದಲು ಪೂರ್ಣಗೊಳಿಸಲಾಗುವುದು. SSC ತನ್ನ ಮುಂಬರುವ ಪರೀಕ್ಷೆಗಳಿಗೆ 67,768 ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಯೋಜನೆಗಳನ್ನು ರೂಪಿಸಿದೆ ಎಂದು ಪಿಐಬಿ ತಿಳಿಸಿದೆ.

‘ಅಗ್ನಿಪಥ’ ಯೋಜನೆಗೆ ಸಂಬಂಧಿಸಿದಂತೆ ದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಈ ನೇಮಕಾತಿ ವಿಚಾರ ಗಮನ ಸೆಳೆದಿದೆ. SSC 15,247 ಹುದ್ದೆಗಳಿಗೆ ನೇಮಕಾತಿ ಪತ್ರಗಳ ವಿತರಣೆಯನ್ನು ಪ್ರಕ್ರಿಯೆಗೊಳಿಸುತ್ತಿದ್ದು, ಮುಂದಿನ ತಿಂಗಳುಗಳಲ್ಲಿ ವಿವಿಧ ಇಲಾಖೆಗಳು ನೇಮಕಾತಿ ಪತ್ರ ನೀಡಲಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...