alex Certify ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ : ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ.

2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರುಗಳಿಗೆ ಆಗಸ್ಟ್-2023 ಮತ್ತು ಸೆಪ್ಟೆಂಬರ್-2023ರ ಮಾಹೆಗಳಿಗೆ ಗೌರವಧನವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ.

2023-24ನೇ ಸಾಲಿನ ಆಯವ್ಯಯ ಲೆಕ್ಕಶೀರ್ಷಿಕೆ: 2202-03-103-2-01-324 ಇತರೆ ಸರ್ಕಾರಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ಒಟ್ಟು ರೂ.196,00,00,000/-ಗಳ ಅನುದಾನ ಹಂಚಿಕೆಮಾಡಲಾಗಿರುತ್ತದೆ. ಉಲ್ಲೇಖ(02)ರ ಆದೇಶದಲ್ಲಿ ಮೂರನೇ ಕಂತಿನ ಅನುದಾನ ರೂ 65,33,33,333/-ಗಳ ಅನುದಾನ ಬಿಡುಗಡೆ ಮಾಡಲಾಗಿರುತ್ತದೆ.

ಅದರಂತೆ 2023-24ನೇ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಪ್ರಥಮದರ್ಜೆ ಸಂಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಕಾಲೇಜುಗಳು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಜುಲೈ-2023ರ ವರಗಿನ ಗೌರವಧನ ಪಾವತಿಸಲು ಅನುದಾನ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಸದರಿ ಅತಿಥಿ ಉಪನ್ಯಾಸಕರುಗಳಿಗೆ ಪ್ರಸ್ತುತ ಆಗಸ್ಟ್-2023 ಮತ್ತು ಸೆಪ್ಟೆಂಬರ್-2023ರ ಮಾಹೆಗಳ ಗೌರವಧನವನ್ನು ಪಾವತಿಸಲು ಹಾಗೂ ಹಿಂದಿನ ಮಾಹೆಗಳಿಗೆ ಕೊರತೆ ಆಗಿರುವ ಅನುದಾನವನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಅನುದಾನವನ್ನು ಬಿಡುಗಡೆ ಮಾಡಬೇಕಾಗಿದ್ದು, ಅದರಂತೆ ಈ ಆದೇಶ.

ಇಲಾಖಾ ವ್ಯಾಪ್ತಿಯಡಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2022-23ನೇ ಸಾಲಿಗೆ ನೇಮಕಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಆಗಸ್ಟ್-2023 ಮತ್ತು ಸೆಪ್ಟೆಂಬರ್-2023ರ ಮಾಹೆಗಳ ಗೌರವಧನವನ್ನು ಪಾವತಿಸಲು ಹಾಗೂ ಹಿಂದಿನ ಮಾಹೆಗಳಿಗೆ ಕೊರತೆ ಆಗಿರುವ ಅನುದಾನವನ್ನು ಗೌರವಧನ ಪಾವತಿಸಲು ಸರ್ಕಾರಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಗೌರವಧನ ರಡಿಯಲ್ಲಿ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-01 ರಿಂದ 04ರಲ್ಲಿ ವಿವರಿಸಿರುವಂತೆ ಒಟ್ಟು ರೂ 20,46,64,708/- (ಇಪ್ಪತ್ತು ಕೋಟಿ ನಲವತ್ತಾರು ಲಕ್ಷದ ಅರವತ್ತನಾಲ್ಕು ಸಾವಿರದ ಏಳುನೂರ ಎಂಟು ರೂಪಾಯಿಗಳು ಮಾತ್ರ) ಗಳ ಅನುದಾನವನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...