ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ 2024ರ ಜನವರಿ 1ರಿಂದ ಪೂರ್ವಾನ್ವಯ ಆಗುವಂತೆ ಗೌರವಧನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ.