ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗೆ ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಯಾವುದೇ ತೊಂದರೆ ಆಗದೇ ಇರಲೆಂದು ಅತಿಥಿ ಶಿಕ್ಷಕರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಒಟ್ಟು 3253 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಸೀಬೆ ಎಲೆಯಲ್ಲಿದೆ ನೀಳ ಕೂದಲ ‘ಸೌಂದರ್ಯ’ದ ಗುಟ್ಟು
ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಒಟ್ಟು 5078 ಅತಿಥಿ ಶಿಕ್ಷಕರ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸದ್ಯಕ್ಕಿರುವ ಮಾಹಿತಿಯು ಬೇಡಿಕೆಯ 64 ಪ್ರತಿಶತ ಅಂದರೆ ಹಣಕಾಸು ಇಲಾಖೆ 3253 ಹುದ್ದೆಗಳ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
ಈ 3253 ಹುದ್ದೆಗಳಲ್ಲಿ ಆಯಾ ತಾಲೂಕುಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಮಿತಿ ನೀಡಲಾಗಿದೆ. ಈ ಮಿತಿಯ ಅಡಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅತಿಥಿ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ಯಾವುದೇ ಪ್ರಮಾದಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಉಪನಿರ್ದೇಶಕರು ಜವಾಬ್ದಾರಿಯಾಗಿರುತ್ತಾರೆ ಎಂದು ಸರ್ಕಾರ ಹೇಳಿದೆ.