ಬೆಂಗಳೂರು : ‘ಆರೋಗ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ 18 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ನಂತರ ಮಾತನಾಡಿದ ಸಚಿವರು ಪಾಲಿಕೆ ಸಾರ್ವಜನಿಕ ಆರೋಗ್ಯ ವಿಭಾಗದಲ್ಲಿ ಪುರುಷ ಆರೋಗ್ಯ ಕಾರ್ಯಕರ್ತರು ಹಾಗೂ ಎ ಎನ್ ಎಂ ಸಿಬ್ಬಂದಿ ಕೊರತೆ ಇದೆ. ಸಿಬ್ಬಂದಿಗೆ 12 ಸಾವಿರ ಸಂಬಳ ನೀಡುತ್ತಿರುವುದರಿಂದ ಸಿಬ್ಬಂದಿ ಕೆಲಸಕ್ಕೆ ಬರುತ್ತಿಲ್ಲ, ಆದ್ದರಿಂದ ಹೆಚ್ಚುವರಿಯಾಗಿ 6 ಸಾವಿರದೊಂದಿಗೆ 18 ಸಾವಿರಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದರು.ಬೆಂಗಳೂರಿನಲ್ಲೇ 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ, ಡೆಂಗ್ಯೂ ಜ್ವರದಿಂದ 7 ಜನರು ಮೃತಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಗುಂಡೂರಾವ್ ಸೂಚನೆ ನೀಡಿದರು. ಡೆಂಗ್ಯೂ ಕುರಿತಂತೆ ಜಾಗೃತಿ ಮಾಡಿದರೆ ಸಾಲದು ಈ ಬಗ್ಗೆ ಆರೋಗ್ಯ ಕಾರ್ಯಕರ್ತರು ಜನರಲ್ಲಿ ಎಚ್ಚರಿಕೆ ಮೂಡಿಸಬೇಕು ಎಂದರು.