ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಗಳ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರು ಅಥವಾ ತತ್ಸಮಾನ ಗ್ರೂಪ್ ಬಿ ವೃಂದಕ್ಕೆ ಬಡ್ತಿ ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜ್ಯೇಷ್ಠತಾ ಪಟ್ಟಿ ಪ್ರಕಟಿಸಿದೆ.
ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ಸ್ಥಾನಪನ್ನಾ ಬಡ್ತಿ ನೀಡಲು ಉದ್ದೇಶಿಸಿರುತ್ತದೆ. ಉಲ್ಲೇಖ-1 ರಂತೆ ಬೆಂಗಳೂರು ಮತ್ತು ಮೈಸೂರು ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರ ಅಂತಿಮ ಜೇಷ್ಠತಾ ಪಟ್ಟಿಯನ್ನು ಉಲ್ಲೇಖದ ಅಧಿಸೂಚನೆಯಲ್ಲಿ ದಿನಾಂಕ:24/11/2023 ರಂದು 01.01.2023 ರಲ್ಲಿದ್ದಂತೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಕಟಿಸಿರುವ ಜೇಷ್ಠತಾ ಪಟ್ಟಿಯನ್ನು ಅನುಸರಿಸಿ ಬೆಂಗಳೂರು/ಮೈಸೂರು ವಿಭಾಗದಲ್ಲಿ ಖಾಲಿ ಇರುವ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಈ ಪತ್ರದೊಂದಿಗೆ ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ವೃಂದದಿಂದ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಹುದ್ದೆಗಳಿಗೆ ಬಡ್ತಿ ನೀಡಬಹುದಾದ ಪಟ್ಟಿಯನ್ನು ಇಲಾಖೆಯ ವೆಬ್ ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.