
ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟೋರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಾಗರಿಕರು ಇನ್ನು ಮನೆ ನಿರ್ಮಾಣಕ್ಕೆ ಕಟ್ಟಡ ನಕ್ಷೆ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆಯಬೇಕಾಗಿಲ್ಲ. ಇದಕ್ಕಾಗಿ ಸ್ವಯಂಚಾಲಿತ ನಕ್ಷೆ ಮಂಜೂರು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 50×80 ಅಡಿಗಳವರೆಗಿನ ನಿವೇಶನಗಳಿಗೆ ಈ ಯೋಜನೆಯಲ್ಲಿ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಿದರು.
ಉದ್ಯಾನ, ಆಟದ ಮೈದಾನಗಳ ನಿರ್ವಹಣೆಗೆ ಸ್ಥಳೀಯ ನಾಗರಿಕರ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ರಚಿಸಲಾಗುತ್ತದೆ, ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ ಸಿಎಸ್‌ಆರ್ ನಿಧಿಯಿಂದ ಅಭಿವೃದ್ಧಿ ಕೆಲಸಗಳನ್ನೂ ಈ ಸಮಿತಿ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.