alex Certify ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ನಿರ್ಮಾಣಕ್ಕೆ `ತ್ವರಿತ ಕಟ್ಟಡ ನಕ್ಷೆ’ ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ನಿರ್ಮಾಣಕ್ಕೆ `ತ್ವರಿತ ಕಟ್ಟಡ ನಕ್ಷೆ’ ಮಂಜೂರು

ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕಟ್ಟೋರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ  ನೀಡಿದ್ದು, ನಾಗರಿಕರು ಇನ್ನು ಮನೆ ನಿರ್ಮಾಣಕ್ಕೆ ಕಟ್ಟಡ ನಕ್ಷೆ ಪಡೆಯಲು ಬಿಬಿಎಂಪಿ ಕಚೇರಿಗೆ ಅಲೆಯಬೇಕಾಗಿಲ್ಲ. ಇದಕ್ಕಾಗಿ ಸ್ವಯಂಚಾಲಿತ ನಕ್ಷೆ ಮಂಜೂರು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ 50×80 ಅಡಿಗಳವರೆಗಿನ ನಿವೇಶನಗಳಿಗೆ ಈ ಯೋಜನೆಯಲ್ಲಿ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಿದರು.

ಉದ್ಯಾನ, ಆಟದ ಮೈದಾನಗಳ ನಿರ್ವಹಣೆಗೆ ಸ್ಥಳೀಯ ನಾಗರಿಕರ ‘ರಾಜಕೀಯೇತರ ಸಾರ್ವಜನಿಕ ಸಮಿತಿ’ ರಚಿಸಲಾಗುತ್ತದೆ, ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಿಸಿ ಸಿಎಸ್‌ಆರ್‌ ನಿಧಿಯಿಂದ ಅಭಿವೃದ್ಧಿ ಕೆಲಸಗಳನ್ನೂ ಈ ಸಮಿತಿ ಕೈಗೊಳ್ಳಬಹುದಾಗಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...