alex Certify ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಫಲಾನುಭವಿಗಳಿಗೆ ಆಶ್ರಯ ಮನೆಗಳ ಹಸ್ತಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಫಲಾನುಭವಿಗಳಿಗೆ ಆಶ್ರಯ ಮನೆಗಳ ಹಸ್ತಾಂತರ

ಬಳ್ಳಾರಿ : ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಪೂರ್ಣಗೊಳಿಸಿ ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದು ವಸತಿ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು ಭರವಸೆ ನೀಡಿದರು.

ಸಂಡೂರು ಸೇರಿದಂತೆ ವಿವಿಧ ಗಣಿ ಬಾದಿತ ಹಳ್ಳಿಗಳು ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯಗಳಿಗೆ ಬೇಟಿ ನೀಡಿ ಪರಿಶೀಲಿಸಿ ಜೊತೆಗೆ ಸ್ಥಳೀಯರನ್ನು ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಆಶ್ರಯ ಕಾಲೋನಿಯ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಕಾಮಗಾರಿ ಗುಣಮಟ್ಟ ಕಾಯ್ದುಕೊಂಡಿರುವ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಹೊರ ಹೊಲಯದ ಮುಂಡರಗಿ ಆಶ್ರಯ ಕಾಲೋನಿಯಲ್ಲಿ ಒಟ್ಟು 56 ಎಕರೆಯಲ್ಲಿ 365 ಕೋಟಿ ರೂ. ಗಳ ವೆಚ್ಚದಲ್ಲಿ 5616 ಮನೆಗಳ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗುತ್ತಿದ್ದು, ಮೊದ ಹಂತದಲ್ಲಿ 2592 ಮನೆಗಳ ನಿರ್ಮಾಣ ಮಾಡಲಾಗುತ್ತಿದೆ. ಅದರಲ್ಲಿ ಈಗಾಗಲೇ 365 ಮನೆಗಳು ಪೂರ್ಣಗೊಂಡಿದ್ದು, 1000 ಮನೆಗಳು ನಿರ್ಮಾಣ ಹಂತದಲ್ಲಿವೆ ಮತ್ತು ಉಳಿದಿರುವುಗಳದ್ದು ಅಡಿಪಾಯ ಆಗಿದೆ, ಪೂರ್ಣಗೊಂಡಿರುವ ಮನೆಗಳನ್ನು ಶೀಘ್ರದಲ್ಲಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...