ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸುತ್ತಿರುವ 2.30 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಆರ್ಥಿಕ ನೆರವು ಒದಗಿಸಲು ಸಿಎಂ ಸಮ್ಮತಿಸಿದ್ದಾರೆ. ಹತ್ತು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವಸತಿ ಯೋಜನೆಗಳನ್ನು ವರ್ಷದೊಳಗೆ ಪೂರ್ಣಗೊಳಿಸಿ ಹಂಚಿಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಪೂರ್ಣಗೊಳಿಸಲು 500 ಕೋಟಿ ರೂ. ಸಾಲದ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಎಂದು ಹೇಳಿದ್ದಾರೆ.