ಬೆಂಗಳೂರು : 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್, ನಿರ್ಮಲ ಕಿಟ್ ಮತ್ತು ಸ್ಪೂರ್ತಿ ಕಿಟ್, ಸಿರಿಗಂಧ ಕಿಟ್‌ಗಳನ್ನು ಒದಗಿಸಲು ಸುಮಾರು 87.65 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.
2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶುಚಿ ಸಂಭ್ರಮ ಕಿಟ್ ಮತ್ತು ಸಿರಿಗಂಧ ಕಿಟ್ ಗಳನ್ನು ರೂ.87.65 ವೆಚ್ಚದಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KS&DL) ಸಂಸ್ಥೆ, ಬೆಂಗಳೂರು ಇವರಿಂದ ಈ ಕಳಕಂಡ ಷರತ್ತುಗಳಿಗೊಳಪಟ್ಟು ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಮಾಜ ಕಲ್ಯಾಣ ಇಲಾಖೆಗೆ ಪಾರದರ್ಶಕತ ಕಾಯ್ದೆಯಿಂದ ವಿನಾಯಿತಿ ನೀಡಿದೆ.