ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ 2000 ರೂ ನೀಡುವ ಸಲುವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅವಧಿಗಾಗಿ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ.
ಮೊದಲ ಕಂತಿನ ಹಣ 4600 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಗೃಹಲಕ್ಷ್ಮಿ ಯೋಜನೆ ಅನುಷ್ಟಾನಕ್ಕಾಗಿ 2023-24 ನೇ ಸಾಲಿಗೆ 17,500 ರೂ ಕೋಟಿ ರೂ ನಿಗದಿ ಮಾಡಲಾಗಿದೆ. ಮೊದಲ ಕಂತು 4,375 ಕೋಟಿ ರೂ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ವಿವಿಧ ಷರತ್ತಿಗೊಳಪಟ್ಟು 4600 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅರ್ಜಿ ಸಲ್ಲಿಸಿದ ಎಲ್ಲಾ ಮನೆ ಯಜಮಾನಿಯರಿಗೂ ಪ್ರತಿ ತಿಂಗಳು 2000 ರೂ ಹಣ ಜಮಾ ಆಗಲಿದೆ. ಸ್ವಲ್ಪ ತಡವಾಗಬಹುದು, ಆದರೆ ಎಲ್ಲಾ ಫಲಾನುಭವಿಗಳಿಗೂ ಹಣ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.