ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ. ಇದೀಗ ಯಜಮಾನಿಯರಿಗೆ ಗುಡ್ ನ್ಯೂಸ್ ಏನಪ್ಪ ಅಂದರೆ ಅರ್ಜಿ ಸಲ್ಲಿಸಿದ ಎಲ್ಲರಿಗೂ 10 ದಿನದೊಳಗೆ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ.
ಹೌದು, ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ. ಯಾರಿಗೆಲ್ಲಾ ಹಣ ಬಂದಿಲ್ಲವೋ ಅವರಿಗೆ 10 ದಿನದಲ್ಲಿ ಹಣ ಹಾಕುವ ವ್ಯವಸ್ಥೆ ಮಾಡಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಖಡಕ್ ಆಗಿ ಸೂಚನೆ ನೀಡಿದ್ದಾರೆ.
ಜಮಾ ಆಗದೆ ಇರುವ ನಾಲ್ಕರಿಂದ ಐದು ಲಕ್ಷ ಮಹಿಳೆಯರ ಖಾತೆಗೆ 10 ದಿನಗಳಲ್ಲಿ ಹಣ ವರ್ಗಾವಣೆ ಆಗಲೇಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಗ್ರಾಮ ಅದಾಲತ್ ಮೂಲಕ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಯಾರ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೋ ಅಂತವರ ಹೆಸರುಗಳನ್ನು ಸಂಗ್ರಹಿಸಬೇಕು, ಆ ಲಿಸ್ಟ್ ಅನ್ನು ಸರ್ಕಾರಕ್ಕೆ ಕಳುಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಇದುವರೆಗೂ ಮೂರು ಕಂತಿನ ದುಡ್ಡು ಬಾರದೇ ಇದ್ದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಏಕಕಾಲಕ್ಕೆ 6 ಸಾವಿರ ರೂ. ಖಾತೆಗೆ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪಿಡಿಒ ನೆರವು ಪಡೆದು ಎಲ್ಲಾ ಅರ್ಹ ಪಲಾನುಭವಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.