ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಇದುವರೆಗೆ ಕೆಲವು ಮಹಿಳೆರಿಗೆ ಹಣ ಬಂದಿಲ್ಲ.
ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೂ ಇನ್ಮುಂದೆ ಹಣ ಬರುತ್ತದೆ. ಮನೆ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಕುಟುಂಬದ ಮೊದಲ ಯಜಮಾನ ಅಲ್ಲದೇ ಇದ್ದರೆ ಎರಡನೆಯ ಸದಸ್ಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಹಿರಿಯ ವ್ಯಕ್ತಿ ಯಾರೆಂದು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇನ್ನುಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿ ಹಣ ಹಾಕುತ್ತಾರೆ.
ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.