alex Certify BIG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 13 ಸಾವಿರ ‘KSRTC’ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 13 ಸಾವಿರ ‘KSRTC’ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕ

ಬೆಂಗಳೂರು : ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೇವೆ ಜಾರಿಗೆ ತಂದಿರುವ ಹಿನ್ನೆಲೆ ಶೀಘ್ರದಲ್ಲೇ 13 ಸಾವಿರ ಬಸ್ ಚಾಲಕರು, ಕಂಡಕ್ಟರ್ ಗಳ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ ‘ ನಾವು ಕೆಎಸ್ ಆರ್ ಟಿಸಿಗೆ ಹೊಸದಾಗಿ 4000 ಬಸ್ ಗಳನ್ನು ಖರೀದಿ ಮಾಡಲು ನಿರ್ಧರಿಸಿದ್ದೇವೆ. ಶಕ್ತಿ ಯೋಜನೆಯಡಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಹತ್ತುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪುರುಷರಿಗೆ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ನಾವು 4000 ಬಸ್ ಗಳನ್ನು ಖರೀದಿ ಮಾಡಿ 13 ಸಾವಿರ ಚಾಲಕರು, ಕಂಡಕ್ಟರ್ ಗಳ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದರು.

ಜೂನ್ 11 ರಿಂದ ಶಕ್ತಿ ಯೋಜನೆ ಆರಂಭವಾಗಿದ್ದು, ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜುಲೈ 12 ರವರೆಗೆ ಬರೋಬ್ಬರಿ 18 ಕೋಟಿ ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 18 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ.

ಶಕ್ತಿ ಯೋಜನೆಗೆ 1 ತಿಂಗಳು ತುಂಬಿದ್ದು, ಈ ಅವಧಿಯಲ್ಲಿ ಒಟ್ಟು 17.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಒಟ್ಟು ಟಿಕೆಟ್ ಮೌಲ್ಯ 402 ಕೋಟಿ ರೂ. ಗಳಷ್ಟಾಗಿದೆ.ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಕಳೆದೊಂದು ತಿಂಗಳಲ್ಲಿ 32.89 ಕೋಟಿ ಜನರು ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಸಿದ್ದು, ಅದರಲ್ಲಿ 16.73 ಕೋಟಿ ಮಹಿಳಾ ಪ್ರಯಾಣಿಕರಿದ್ದಾರೆ.ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ 5.09 ಕೋಟಿ ಮಹಿಳೆಯರು, ಬಿಎಂಟಿಸಿಯಲ್ಲಿ 5.38 ಕೋಟಿ ಮಹಿಳೆಯರು, ವಾಕರಸಾನಿಯಲ್ಲಿ 4.02 ಕೋಟಿ ಮಹಿಳೆಯರು, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ 2.23 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...