ಮೈಸೂರು : ಶೀಘ್ರದಲ್ಲೇ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಸಿಬ್ಬಂದಿಗಳ ನೇಮಕ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಅವರು ನಗರದಲ್ಲಿ ನಿನ್ನೆ ನಡೆದ ಅಂಬೇಡ್ಕರ್ ಜಯಂತಿ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಒಟ್ಟು 11 ಸಾವಿರ ಸಿಬ್ಬಂದಿಗಳು ನಿವೃತ್ತಿ ಹೊಂದಿದ್ದು, ಕಳೆದ 7 ವರ್ಷಗಳಿಂದ ಚಾಲಕರು, ನಿರ್ವಾಹಕರು ಹಾಗೂ ಮೆಕ್ಯಾನಿಕ್ ಗಳ ನೇಮಕಾತಿ ನಡೆದಿರಲಿಲ್ಲ. ಶೀಘ್ರದಲ್ಲೇ 17 ಸಾವಿರ ಸಿಬ್ಬಂದಿಗಳನ್ನು ನೇಮಕಾತಿ ಮಾಡಲಾಗುತ್ತದೆ. ಹಾಗೂ 4 ಸಾವಿರ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂದರು.
ಸದ್ಯ, ಶಕ್ತಿ ಯೋಜನೆಯಡಿ ಸುಮಾರು 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದುವರೆಗೆ ಸುಮಾರು 65 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.