alex Certify ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಆ.13 ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಆ.13 ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ ಆಯೋಜನೆ

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆ.13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆವರೆಗೆ ನಗರದ ಹಳೆ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ಮೇಳದಲ್ಲಿ 4 ರಿಂದ 5 ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು.

ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ಕಾರ್ಡ್ ಪ್ರತಿ ಮತ್ತು ಸ್ವ ವಿವರಗಳೊಂದಿಗೆ ಅಂದು ನಡೆಯುವ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...