ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 12 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ವಿಮಾನ ನಿಲ್ದಾಣದ ವ್ಯವಸ್ಥಾಪಕ ನಿರ್ದೇಶಕ, ಸಿಇಒ ಹರಿ ಮರಾರ್ ತಿಳಿಸಿದರು.
ಬುಧವಾರ ನಗರದಲ್ಲಿ ನಡೆದ ಸೋಲ್ ಬೆಂಗಳೂರು ಬಿಸಿನೆಸ್ ಕಾನ್ಕ್ಷೇವ್ ನಲ್ಲಿ ‘ಬೆಂಗಳೂರು ರೂಪಾಂತರ’ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮುಂದಿನ 2ವರ್ಷದಲ್ಲಿ ಇಂಡಿಗೋ, ವಿಮಾನನಿಲ್ದಾಣ ಆವರಣದಲ್ಲಿ ಏರ್ ಇಂಡಿಯಾ ಹಬ್ ನಿರ್ಮಾಣವಾಗಲಿದೆ ಹಾಗೂ 2500 ಕೋಟಿ ವೆಚ್ಚದ ಏರ್ಪೋರ್ಟ್ ಸಿಟಿ, 2ನೇ ಟರ್ಮಿನಲ್ನ ಉಳಿದ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಕೆಲಸಗಳು ನಡೆಯುತ್ತಿವೆ’ ಎಂದು ಹೇಳಿದರು. ಹಾಗೂ ಮುಂದಿನ 2 ವರ್ಷದಲ್ಲಿ 12 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದರು.
ಸದ್ಯದ ಬೆಳವಣಿಗೆಯನ್ನು ನೋಡಿದರೆ 2023 ರ ವೇಳೆಗೆ ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದೆ. ಬೆಂಗಳೂರು ವಿಮಾನ ನಿಲ್ದಾಣ ಅಭಿವೃದ್ದಿಗೆ 2030 ರ ವೇಳೆಗೆ ಸುಮಾರು 15 ಸಾವಿರ ಕೋಟಿ ಹೂಡಿಕೆಯಾಗಲಿದೆ ಎಂದರು.