alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ ಬಸ್ ಚಾಲಕ,ನಿರ್ವಾಹಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 13 ಸಾವಿರ ಬಸ್ ಚಾಲಕ,ನಿರ್ವಾಹಕರ ನೇಮಕ

ತುಮಕೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿಯಿರುವ 13 ಸಾವಿರ ಚಾಲಕ, ನಿರ್ವಾಹಕರ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 13 ಸಾವಿರ ಚಾಲಕ,ನಿರ್ವಾಹಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಆರ್ಥಿಕ ಇಲಾಖೆಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೀಗಾಗಿ ಆರ್ಥಿಕ ಇಲಾಖೆ ಒಪ್ಪಿದ್ರೆ ಶೀಘ್ರವೇ 13 ಸಾವಿರ ಚಾಲಕ, ನಿರ್ವಾಹಕರ ನೇಮಕಾತಿ ನಡೆಯಲಿದೆ ಎಂದರು.

ರಾಜ್ಯದಲ್ಲಿ 7 ವರ್ಷಗಳಿಂದ ಸಾರಿಗೆ ಇಲಾಖೆಯಲ್ಲಿ ನೇಮಕಾತಿ ನಡೆದಿಲ್ಲ. ಹಿಗಾಗಿ ಹೊಸ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಜೊತೆಗೆ 5 ಸಾವಿರ ಹೊಸ ಬಸ್ಸುಗಳ ಖರೀದಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...