ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಖಾಲಿ ಇರುವ 1,500 ಪಿಎಸ್‌ಐ ಹುದ್ದೆ ಗಳಿಗೆ ನೇಮಕ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ನೇಮಕವಾಗಿದ್ದ 545 ಹುದ್ದೆಗಳನ್ನು ಹಗರಣದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇದೀಗ ಕೆಇಎ ಮರು ಪರೀಕ್ಷೆ ನಡೆಸಲಿದೆ.ಈ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ನಡೆಯಬೇಕಿದೆ ಎಂದು ತಿಳಿಸಿದ್ದಾರೆ.
ಪಿಎಸ್ ಐ ನೇಮಕಾತಿ ಸಂಬಂಧ ಸೂಚನೆ ಹೊರಡಿಸಲಿರುವ ಪಿಎಸ್‌ಐ ನೇಮಕಕ್ಕೂ ಕೆಪಿಎಸ್ ಸಿ, ತಾಂತ್ರಿಕ ವಿವಿ ಸೇರಿ ಅನೇಕ ಸ್ವತಂತ್ರ ಸಂಸ್ಥೆಗಳ ಮೂಲಕ ಕೆಇಎ ಪರೀಕ್ಷೆ ನಡೆಸಲಿದೆ ಎಂದು ಹೇಳಿದ್ದಾರೆ.