ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 3 ಸಾವಿರ ಪೊಲಿಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಬರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಂದಿನ 6 ತಿಂಗಳಲ್ಲಿ 1,500 ಪಿಎಸ್ ಐ ಹಾಗೂ 3,000 ಪೊಲೀಸ್ ಕಾನ್ಸ್ ಟೇಬಲ್ ಗಳು ಸೇರಿದಂತೆ 4,457 ಹುದ್ದೆಗಳನ್ನು ಬರ್ತಿ ಮಾಡಲಾಗುವುದು. ನ್ಯಾಯಾಲಯದಿಂದ ಒಪ್ಪಿಗೆ ದೊರೆತ ಹಿನ್ನೆಲೆಯಲ್ಲಿ 545 ಪಿಎಸ್ ಐ ಹುದ್ದೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 15 ಸಾವಿರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಮೊದಲ ಹಂತದಲ್ಲಿ 3,000 ಕಾನ್ ಸ್ಟೇಬಲ್ ಗಳನ್ನು ನೇಮಕ ಮಾಡುವ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳ್ಳಲಿದೆ. ನೇಮಕ ಮಾಡಿಕೊಳ್ಳುವ ಕಾನ್ ಸ್ಟೇಬಲ್ ಗಳಿಗೆ ತರಬೇತಿ ನೀಡುವ ಅಗತ್ಯವಿರುವುದರಿಂದ ಒಂದೇ ಕಂತಿನಲ್ಲಿ 15 ಸಾವಿರ ಮಂದಿಯನ್ನು ನೇಮಿಸಿಕೊಳ್ಳುವುದು ಕಷ್ಟವಾಗಲಿದೆ ಎಂದು ಹೇಳಿದ್ದಾರೆ.