![](https://kannadadunia.com/wp-content/uploads/2023/11/dr-sudhakar.jpg)
ಚಿಂತಾಮಣಿ : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಧ್ಯಾಪಕ ಹುದ್ದೆಗಳಿಗೆ 7 ಸಾವಿರ ಮಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಬಹುತೇಕ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಶೀಘ್ರವಾಗಿ ಬೋಧಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ ಎಂದು ತಿಳಿಸಿದ್ದಾರೆ.