alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ , ಶೀಘ್ರವೇ ರಾಜ್ಯ ಸರ್ಕಾರದಿಂದ 750 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ನಡೆಯಲಿದೆ.

50 ಗ್ರಾಮ ಲೆಕ್ಕಾಧಿಕಾರಿ (Village Accountant) / ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಅತೀ ಶೀಘ್ರದಲ್ಲಿಯೇ ನಿರೀಕ್ಷಿಸಬಹುದು.ಈ ಹುದ್ದೆಗಳನ್ನುಈ ಮೊದಲು PUC ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಲಾಗುತ್ತಿತ್ತು, ಆದರೆ ಇದೀಗ ಅದರ ಬದಲು KEA /KPSC ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿದ ಕಂದಾಯ ಸಚಿವ ಕೃಷ್ಣಭೈರೇಗೌಡ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಪ್ರಸ್ತುತ ಇರುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಮಾಡಿ, ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಖಾಲಿಯರುವ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು. ಹುದ್ದೆಗಳನ್ನು ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪ್ರಸ್ತುತ ಖಾಲಿ ಇರುವ 1,839 ಹುದ್ದೆಗಳ ವಿಭಾಗವಾರು, ಜಿಲ್ಲಾವಾರು & ತಾಲ್ಲೂಕಾವಾರು ಸಂಪೂರ್ಣ ಮಾಹಿತಿ ಇಲ್ಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...