![](https://kannadadunia.com/wp-content/uploads/2022/06/Dinesh-Gundu-Rao.jpg)
ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 800 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈಗಾಗಲೇ ಪ್ರಕ್ರಿಯೆ ಆರಂಭವಾಗಿದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಶುಶ್ರೂಷಕರು, ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ 800 ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಯಾವುದೇ ಸಿಬ್ಬಂದಿ ನೇಮಕಾತಿ ಮಾಡಲಾಗಿಲ್ಲ. ಹಂತ ಹಂತವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದೆ. ಮೊದಲ ಹಂತದಲ್ಲಿ ರಾಜ್ಯಾದ್ಯಂತ 800 ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.