alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 9 ಸಾವಿರ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಕಳೆದ 7 ವರ್ಷಗಳಿಂದ ನೇಮಕಾತಿ ಆಗಿಲ್ಲ. ಈ ಅವಧಿಯಲ್ಲಿ 13 ಸಾವಿರ ಸಿಬ್ಬಂದಿ ನಿವೃತ್ತಿಯಾಗಲಿದ್ದು,9 ಸಾವಿರ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು 4 ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 5,500 ಹೊಸ ಬಸ್‌ ಗಳ ಖರೀದಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.  ನಮ್ಮ ಸರ್ಕಾರ ಇಡೀ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿದೆ. ಸಾರಿಗೆ  ಸಂಸ್ಥೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...