ಬೆಂಗಳೂರು : : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸ್ಟಾಫ್ ನರ್ಸ್ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಸ್ಟಾಫ್ನರ್ಸ್ (ಶುಶೂಷಾಧಿಕಾರಿ) ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸ್ಟಾಫ್ನರ್ಸ್ (ಶುಶೂಷಾಧಿಕಾರಿ) ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.
ಸ್ವಾಫ್ ನರ್ಸ್ (ಶುಶೂಷಾಧಿಕಾರಿ)
1. ಶೈಕ್ಷಣಿಕ ವಿದ್ಯಾರ್ಹತೆ :
Staff Nurse (Nursing Officer): Should be registered nurse with certificate of nursing recognized by the nursing council.
2. ಪಿಂಚಣಿ ಸೌಲಭ್ಯ, ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ (ಎಸ್ಪಿಎಲ್) 14 ಪಿಇಟಿ 2005, ದಿನಾಂಕ: 31-03- 2006 do.
3. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು;
ಗರಿಷ್ಠ ವಯೋಮಿತಿ 35 ವರ್ಷಗಳು, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.
ನೇಮಕಾತಿಯ ಗರಿಷ್ಟ ವಯೋಮಿತಿಯನ್ನು ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು, ಎನ್.ಸಿ.ಸಿ ಪರಿವೀಕ್ಷಕರು, ಗ್ರಾಮ ಸಮೂಹ ಪರಿಶೀಲಕರು. ಜೀತ ಕಾರ್ಮಿಕರು, ಜನಗಣತಿ ಮತ್ತು ವಿಧವೆ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ಸಡಿಲಿಕೆ ನೀಡಲಾಗುವುದು. ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ ನಿಯಮ 6 ರಲ್ಲಿ ನಿಗಧಿಪಡಿಸಿರುವಂತೆ ನಿಗದಿತ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಬೇಕು. ಆದರೆ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ.