ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಕೆಎಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಸೇರಿದಂತೆ ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ . ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿನ (ಸೇವೆಗಳು-2) ಸಹಾಯಕ ಆಯುಕ್ತ (ಕಿರಿಯ ಶ್ರೇಣಿ) 20 ಹುದ್ದೆಗಳು ಸೇರಿ ಒಟ್ಟು 105 ಹುದ್ದೆಗಳು ಗ್ರೂಪ್ ‘ಎ’ನಲ್ಲಿವೆ. ಕಂದಾಯ ಇಲಾಖೆಯಲ್ಲಿನ ತಹಶೀಲ್ದಾರ್ (ಗ್ರೇಡ್-2) 26 ಹುದ್ದೆಗಳು ಸೇರಿ ಒಟ್ಟು 171 ಹುದ್ದೆಗಳು ಗ್ರೂಪ್ ‘ಬಿ’ ವೃಂದಕ್ಕೆ ಸೇರಿವೆ.
ಕೆಪಿಎಸ್ಸಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಯಾವುದೇ ಅಧಿಸೂಚನೆ ಹೊರಡಿಸಿರಲಿಲ್ಲ, ಇದೀಗ ಕೆಎಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.