alex Certify JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ನೇರ ಸಂದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ : ನಾಳೆ ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಕೋರ್ಟ್ ರೋಡ್ ಶ್ರೀ ದೇವರಾಜ್ ಟರ್ಸ್ ಬಳಿಯ ಪೈ ಇಂಟರ್ ನ್ಯಾಷ್ನಲ್ ನಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಕಾಂ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...