ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 2,000ಕ್ಕೂ ಹೆಚ್ಚು ಚಾಲಕ ಹಾಗೂ ನಿರ್ವಾಹಕರ ನೇಮಕಾತಿ ಕೂಡ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಒಟ್ಟು 5,800 ಬಸ್ಗಳನ್ನು ಖರೀದಿ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 1,000 ಕ್ಕೂ ಹೆಚ್ಚು ಬಸ್ಗಳ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಇದರೊಂದಿಗೆ 2,000ಕ್ಕೂ ಹೆಚ್ಚು ಚಾಲಕ ಹಾಗೂ ನಿರ್ವಾಹಕರ ನೇಮಕಾತಿ ಕೂಡ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.