![](https://kannadadunia.com/wp-content/uploads/2023/04/dailymom-parent-portal-challenges-teachers-face11.jpg)
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಉನ್ನತ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿನ ಸರ್ಕಾರಿ ಪದವಿ, ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 7,100 ಸಹಾಯಕ ಪ್ರಾಧ್ಯಪಕರ ನೇಮಕಾತಿ ಮಾಡಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ.
ಉನ್ನತ ಶಿಕ್ಷಣ ಇಲಾಖೆಯು ಇದೀಗ ಪದವಿ ಕಾಲೇಜುಗಳಿಗೆ 5,800 ಹುದ್ದೆಗಳು ಸೇರಿ ಒಟ್ಟು 7,100 ಹೊಸ ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಸರ್ಕಾರದಿಂದ ಮಂಜೂರಾತಿ ಪಡೆದು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.
ರಾಜ್ಯದ 430 ಪದವಿ ಕಾಲೇಜುಗಳಿಗೆ ೫,೮೦೦ ಸಹಾಯಕ ಪ್ರಾಧ್ಯಪಕ ಹುದ್ದೆಗಳು, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಿಗೆ 1,300 ಬೋಧಕ ಹುದ್ದೆಗಳನ್ನು ಹೊಸದಾಗಿ ಸೃಜಿಸಿ ಭರ್ತಿಗೆ ಅನುಮತಿ ಕೋರಿ ಸಿಎಂ ಸಿದ್ದರಾಮಯ್ಯಗೆ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎನ್ನಲಾಗಿದೆ.