ನವದೆಹಲಿ : ಭಾರತೀಯ ರೈಲ್ವೆ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಉತ್ತರ ರೈಲ್ವೆಯು ಅಸಿಸ್ಟೆಂಟ್ ಲೋಕೋ ಪೈಲಟ್, ಟ್ರೈನ್ ಮ್ಯಾನೇಜರ್, ಟೆಕ್ನಿಷಿಯನ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.
ಈ ಅಧಿಸೂಚನೆಯ ಮೂಲಕ ಒಟ್ಟು 323 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ ಕೋಶವು ಈ ಹುದ್ದೆಗಳ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವರ್ಕ್ಸ್, ಮೆಕ್ಯಾನಿಕಲ್, ಡೀಸೆಲ್, ಎಲೆಕ್ಟ್ರಿಕಲ್, ಫಿಟ್ಟರ್, ಸಿಗ್ನಲಿಂಗ್ ಇತ್ಯಾದಿ ಹುದ್ದೆಗಳು ಖಾಲಿ ಇವೆ.
ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ. ಸಂಬಂಧಪಟ್ಟ ವಿಷಯದಲ್ಲಿ ಐಟಿಐ, ಡಿಪ್ಲೊಮಾ ಮತ್ತು ಪದವಿ ವಿದ್ಯಾರ್ಹತೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 42 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಮೀಸಲಾತಿ ವರ್ಗಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಹ ಮತ್ತು ಆಸಕ್ತರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 28, 2023 ಕೊನೆಯ ದಿನವಾಗಿದೆ. ಆನ್ ಲೈನ್ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಎಎಲ್ಪಿ/ ಟೆಕ್ನಿಷಿಯನ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ, ಭಾಗ ಎ ಯಲ್ಲಿ ಒಟ್ಟು 100 ಪ್ರಶ್ನೆಗಳನ್ನು 90 ನಿಮಿಷಗಳಲ್ಲಿ ಬರೆಯಬೇಕಾಗುತ್ತದೆ.
ಭಾಗ ಬಿ 60 ನಿಮಿಷಗಳಲ್ಲಿ 75 ಪ್ರಶ್ನೆಗಳನ್ನು ಒಳಗೊಂಡಿದೆ. ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ 150 ಅಂಕಗಳಿಗೆ 120 ನಿಮಿಷಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ನಿಟ್ಟಿನಲ್ಲಿ ಅಧಿಸೂಚನೆ, ಅರ್ಜಿ ಮತ್ತು ವಿವರಗಳಿಗಾಗಿ Https://www.rrcnr.org/ ಈ ವೆಬ್ಸೈಟ್ಗೆ ಭೇಟಿ ನೀಡಿ.