alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ

KMF hikes price of Nandini milk, curd in Karnataka; check new rates - Oneindia News

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಖಾಲಿ ಇರುವ ವಿವಿಧ ಒಟ್ಟು 179 ಹುದ್ದೆ ಭರ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಸಿಸ್ಟೆಂಟ್‌ ಮ್ಯಾನೇಜರ್‌- 27, ಟೆಕ್ನಿಕಲ್‌ ಆಫೀಸರ್‌ -15, ಮಾರ್ಕೆಟಿಂಗ್‌ ಆಫೀಸರ್‌- 2, ಸಿಸ್ಟಮ್‌ ಆಫೀಸರ್‌-1, ಟೆಕ್ನಿಕಲ್‌ ಆಫೀಸ್‌-1, ಅಗ್ರಿಕಲ್ಚರ್‌ ಆಫೀಸರ್‌-3, ಅಡ್ಮಿನಿಸ್ಟ್ರೇಟೀವ್‌ ಆಫೀಸರ್‌-1, ಟೆಕ್ನಿಕಲ್‌ ಆಫೀಸರ್‌-3, ಅಕೌಂಟ್‌-1, ಎಕ್ಸ್‌ಟೆನ್ಶನ್‌ ಆಫೀಸರ್‌(ಗ್ರೇಡ್‌ -3)- 16, ಡೇರಿ ಸೂಪರ್ ವೈಸರ್‌(ಗ್ರೇಡ್‌-2)-12, ಅಡ್ಮಿನಿಸ್ಟ್ರೇಟೀವ್‌ ಅಸಿಸ್ಟೆಂಟ್‌ (ಗ್ರೇಡ್‌-2)-24 ಸೇರಿದಂತೆ ಒಟ್ಟು 179 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕರ್ನಾಟಕ ಮಿಲ್ಕ್ ಫೆಡರೇಶನ್‌, ಕೋಲಾರ- ಚಿಕ್ಕಬಳ್ಳಾಪುರದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಪರಿಶಿಷ್ಟರಿಗೆ, ಹಿಂದುಳಿದವರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ) ನಿಗದಿಪಡಿಸಲಾಗಿದೆ.

ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಸೆಪ್ಟೆಂಬರ್ 5 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 04.10.2023 ಅಂತಿಮ ದಿನಾಂಕವಾಗಿದೆ. ಸಾಮಾನ್ಯ ಅಭ್ಯರ್ಥಿಗೆ 1000 ರೂ. ಎಸ್ಸಿ-ಎಸ್ಟಿ ಅಭ್ಯರ್ಥಿಗೆ 500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: http://www.komul.coop/ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...