ಬೆಂಗಳೂರು : ಬೆಂಗಳೂರಿನಲ್ಲಿ ಶೀಘ್ರವೇ 2500 ಹೆಚ್ಚುವರಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಪೊಲೀಸ್ ಇಲಾಖೆಯು ವಿವಿಧ ಹಂತಗಳಲ್ಲಿ ಸಿಬ್ಬಂದಿ ಕೊರತೆಯನ್ನು ಎದುರಿಸುತ್ತಿದೆ, ಅದರಲ್ಲೂ ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಅಗತ್ಯವಿದೆ, ಹಾಗಾಗಿ 2500 ಹೆಚ್ಚುವರಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಪೊಲೀಸ್ ಇಲಾಖೆಯಲ್ಲಿ 1000 ಪಿಎಸ್ಐ ಹುದ್ದೆಗಳು ಸೇರಿದಂತೆ ವಿವಿಧ ಹಂತಗಳಲ್ಲಿ 20,000 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿದ್ದು, ಅದನ್ನು ಭರ್ತಿ ಮಾಡಬೇಕಾಗಿದೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪರಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ.