ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹಾಗೂ ಈ ಬಗ್ಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಹಾಗೂ ರೋಸ್ಟರ್ ಹಾಗೂ ಖಾಲಿ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅರಣ್ಯ ಪಡೆ ಮುಖ್ಯಸ್ಥರು ಸೂಚನೆ ನೀಡಿದ್ದಾರೆ.
ಹೊಸದಾಗಿ ಸೃಜಿಸಲಾದ 413 ಅರಣ್ಯ ವೀಕ್ಷಕ ಹುದ್ದೆಗಳನ್ನು ಚಾಲ್ತಿಯಲ್ಲಿರುವ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ [DR.PR=75:25] ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ, ನೇಮಕಾತಿ ಪಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಮುಂದುವರೆಸಲು ಅನುಮತಿ ನೀಡಲಾಗಿರುತ್ತದೆ.
ಅರಣ್ಯ ವೀಕ್ಷಕ ವೃಂದದ ನೇಮಕಾತಿ ನಿಯಮಗಳನ್ವಯ ಶೇಕಡ 75ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾಗಿದ್ದು, ಅದರನ್ವಯ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಬೇಕಾಗಿರುತ್ತದೆ.ಈ ಕುರಿತು ಆಯಾ ವೃತ್ತಗಳಲ್ಲಿ ಈ ಕೆಳಕಂಡ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರಡು ಅಧಿಸೂಚನೆಯನ್ನು ಸಿದ್ಧಪಡಿಸಿ, ಇದರೊಂದಿಗೆ ಲಗತ್ತಿಸಿ ಕಳುಹಿಸಿದೆ.
ದಿನಾಂಕ:27.09.2023ರಿಂದ 26.10.2023ರ ವರೆಗಿನ ಅವಧಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಪಡೆಯಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಹಾಗೂ ರೋಸ್ಟರ್ ಹಾಗೂ ಖಾಲಿ ಹುದ್ದೆಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅರಣ್ಯ ಪಡೆ ಮುಖ್ಯಸ್ಥರು ಸೂಚನೆ ನೀಡಿದ್ದಾರೆ.