alex Certify BREAKING : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.19, 20 ರಂದು ರಾಜ್ಯಮಟ್ಟದ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.19, 20 ರಂದು ರಾಜ್ಯಮಟ್ಟದ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಫೆ.19, 20 ರಂದು ರಾಜ್ಯಮಟ್ಟದ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 19 ಹಾಗೂ 20 ರಂದು ಸರ್ಕಾರ ಉದ್ಯೋಗ ಮೇಳ ಆಯೋಜನೆ ಮಾಡಿದ್ದು, ಉದ್ಯೋಗಾಂಕ್ಷಿಗಳು ಭಾಗಿಯಾಗಬಹುದಾಗಿದೆ.

ಆಸಕ್ತ ಉದ್ಯೋಗಾಕಾಂಕ್ಷಿಗಳು ಆನ್‌ಲೈನ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಲು ಕರೆ ನೀಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು https://skillconnect.kaushalkar.com/ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.  ಆಸಕ್ತರು ಹೆಚ್ಚಿನ ಮಾಹಿತಿಗಾಗಿ 1800 599 9918 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯುವನಿಧಿ’ ಯೋಜನೆ ನೋಂದಣಿ ಶುರುವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಯುವಶಕ್ತಿಯನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಯುವನಿಧಿ ಯೋಜನೆ ಜಾರಿ ಬೆನ್ನಲ್ಲೇ ರಾಜ್ಯ ಸರ್ಕಾರ ಬೃಹತ್ ಮಟ್ಟದ ಉದ್ಯೋಗ ಮೇಳ ನಡೆಸಲು ತೀರ್ಮಾನಿಸಿದೆ.
ಕರ್ನಾಟಕ ಸರ್ಕಾರವು 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ, ಡಿಪ್ಲೊಮ ಪಾಸಾದ ನಿರುದ್ಯೋಗಿಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದ ಯುವನಿಧಿ ಯೋಜನೆ ಜಾರಿಗೆ ತಂದಿದೆ. ಅದರ ಭಾಗವಾಗಿ ನಿರುದ್ಯೋಗಿಗಳಿಂದ ಅರ್ಜಿ ಸ್ವೀಕಾರವನ್ನು ಮಾಡಿದೆ. ಕರ್ನಾಟಕ ಸರ್ಕಾರವು 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ, ಡಿಪ್ಲೊಮ ಪಾಸಾದ ನಿರುದ್ಯೋಗಿಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದ ಯುವನಿಧಿ ಯೋಜನೆ ಜಾರಿಗೆ ತಂದಿದ್ದು, ಘೋಷಣೆ ಮಾಡಿದಂತೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈ ಬೆನ್ನಲ್ಲೇ ಉದ್ಯೋಗಮೇಳ ಆಯೋಜನೆ ಮಾಡಲು ನಿರ್ಧರಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...