ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಲ್ಲಿ ಶೀಘ್ರವೇ ಖಾಲಿ ಇರುವ 13 ಸಾವಿರ ಹುದ್ದೆ ಗಳ ನೇಮಕಾತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 13 ಸಾವಿರ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುತ್ತದೆ. ಜೊತೆಗೆ ನಾಲ್ಕು ಸಾರಿಗೆ ನಿಗಮಗಳಿಗೆ 4 ಸಾವಿರ ಹೊಸ ಬಸ್ ಗಳನ್ನು ಖರೀದಿಸಲಾಗುವುದು.ಸಾರಿಗೆ ನಿಗಮಗಳ ಬಲವರ್ಧನೆಗೆ ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದ್ದಾರೆ.
KSRTC, BMTC, ಕಲ್ಯಾಣ ಕರ್ನಾಟಕ ಸೇರಿದಂತೆ ನಾಲ್ಕು ಚಾಲಕ, ನಿರ್ವಾಹಕ, ಮೆಕ್ಯಾನಿಕಲ್ ಒಳಗೊಂಡಂತೆ ಸುಮಾರು 16 ಸಾವಿರ ಹುದ್ದೆಗಳು ಖಾಲಿ ಇವೆ. ಶೀಘ್ರವೇ 13 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದರು.