alex Certify ಕಲ್ಯಾಣ ಕರ್ನಾಟಕಕ್ಕೆ ಸಿಎಂ ಗುಡ್ ನ್ಯೂಸ್ : ಮುಂದಿನ ವರ್ಷದಿಂದ 5,000 ಕೋಟಿ ರೂ.ಮೀಸಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಗುಡ್ ನ್ಯೂಸ್ : ಮುಂದಿನ ವರ್ಷದಿಂದ 5,000 ಕೋಟಿ ರೂ.ಮೀಸಲು

 

ಬೆಳಗಾವಿ : ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ  ನೀಡಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನ ಪೂರ್ತಿ ಖರ್ಚಾಗಿ ಅಭಿವೃದ್ಧಿಯಾಗಬೇಕು. ಕಿತ್ತೂರು ಕರ್ನಾಟಕದ 5 ತಾಲ್ಲೂಕುಗಳು ಸೇರಿದಂತೆ ಹಿಂದುಳಿದ, ಅತೀ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ.  ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ  ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು.

ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ. ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ ಎಂದು ಹೇಳಿದ್ದಾರೆ.

ಏಕೀಕರಣಕ್ಕಾಗಿ ಬಹಳ ಜನ ಗಣ್ಯರು ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲು ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ 371 ಗೆ ತಿದ್ದುಪಡಿ ಆಗಿ 371 ಜೆ ಪರಿಚ್ಛೇದಕ್ಕಾಗಿ ಮಲ್ಲಿಕಾರ್ಜುನ ಖರ್ಗೆ,  ಧರ್ಮಸಿಂಗ್,  ವೈಜನಾಥ್ ಪಾಟೀಲ್ ಮುಂತಾದವರು ಹೋರಾಡಿದರು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2014 ಮತ್ತು 2017 ರಲ್ಲಿ ಉತ್ತರ ಕರ್ನಾಟಕದದ ಬಗ್ಗೆ ಚರ್ಚೆಯಾಗಿತ್ತು. ಒಮ್ಮೆ ಈ ಬಗ್ಗೆ ಎರಡು ಗಂಟೆಗಳಿಗೂ ಹೆಚ್ಚು ಕಾಲ ಉತ್ತರ ನೀಡಿದ್ದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...