
ಬೆಳಗಾವಿ : ಕನ್ನಡಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ ಪಡೆಯುತ್ತಿರುವ ಕೈಗಾರಿಕೆಗಳಲ್ಲಿ ಶೇ 70-100 ರಷ್ಟು ಉದ್ಯೋಗವಕಾಶ ನೀಡಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಕೈಗಾರಿಕಾ ನೀತಿಯಡಿ ಸರ್ಕಾರದ ಪ್ರೋತ್ಸಾಹ, ರಿಯಾಯಿತಿ ಪಡೆದಿರುವ ಕೈಗಾರಿಕೆಗಳು ‘ಡಿ’ ಗ್ರೂಪ್‌ನಲ್ಲಿ ಶೇ 100 ರಷ್ಟು ಹಾಗೂ ಒಟ್ಟಾರೆ ಶೇ 70ರಷ್ಟು ಉದ್ಯೋಗಗಳನ್ನು ಕನ್ನಡಿಗರಿಗೆ ನೀಡಬೇಕೆಂಬ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಹುಬ್ಬಳ್ಳಿಯಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 16 ಕಂಪನಿಗಳೊಂದಿಗೆ ₹ 1,275 ಕೋಟಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.