alex Certify ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಸಿಹಿಸುದ್ದಿ : ಕನ್ನಡದಲ್ಲೇ ಸ್ಪರ್ಧಾತ್ಮಕ ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.

ಬುಧವಾರ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಪರೀಕ್ಷೆಗಳನ್ನು ಮಾಡುತ್ತೆ. ನಾವು ಇದನ್ನು ವಿರೋಧ ಮಾಡಬೇಕುತ್ತಾದೆ. ನಮ್ಮ ಮಕ್ಕಳಿಗೆ ಯಾವ ಭಾಷೆ ಗೊತ್ತಿರುತ್ತದೆಯೋ ಅದೇ ಭಾಷೆಯಲ್ಲಿ ಪರೀಕ್ಷೆ ಮಾಡಬೇಕು. ನಾನು ಮತ್ತೆ ಅದನ್ನು ಪರಿಶೀಲನೆ ಮಾಡಿ ಕೇಂದ್ರ ಸರ್ಕಾರ, ಪ್ರಧಾನಿ ಮಂತ್ರಿಗಳಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

ನವೆಂಬರ್ 1 2023 ರಿಂದ 2024 ನವೆಂಬರ್ 1 ರವರೆಗೆ ಕನ್ನಡ ಸಂಭ್ರಮ ವರ್ಷವನ್ನು ಆಚರಣೆ ಮಾಡುವಂತೆ ಘೋಷಣೆ ಮಾಡಲಾಗಿದ್ದು, ಮುಂದಿನ 1 ವರ್ಷದವರೆಗೆ ಕನ್ನಡ ಸಂಭ್ರಮವನ್ನು ಆಚರಿಸುತ್ತೇವೆ. ಇಡೀ ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ  ಎಂದರು.

ನಮ್ಮ ಭಾಷೆ, ನೆಲ, ಜಲ ಸಂಸ್ಕೃತಿ ಬಗ್ಗೆ ಪ್ರತಿಯೊಬ್ಬ ಕನ್ನಡಿಗನೂ ಕೂಡ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡನಾಡು ತಾಯಿನಾಡು, ಕನ್ನಡ ಭಾಷೆ ನನ್ನ ತಾಯಿ ಭಾಷೆ. ಈ ನಾಡಿನ ಋಣ ತೀರಿಸಬೇಕಾದ್ರೆ ಕನ್ನಡ ನೆಲ, ಜಲ ಭಾಷೆ ಸಂಸ್ಕೃತಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕನ್ನಡ ಮಾತನಾಡಬೇಕು. ಬೇರೆ ರಾಜ್ಯಗಳಲ್ಲಿ ಅಧಿಕೃತ ಭಾಷೆಯನ್ನೇ ಹೆಚ್ಚು ಬಳಕೆ ಮಾಡ್ತಾರೆ. ಅದೇ ರೀತಿ ಕರ್ನಾಟಕದಲ್ಲಿರುವ ಪ್ರತಿಯೊಬ್ಬರೂ ಕನ್ನಡದಲ್ಲಿ ಮಾತನಾಡಬೇಕು. ಕನ್ನಡ ಭಾಷೆ ಮಾತನಾಡದೇ ಕರ್ನಾಟಕದಲ್ಲಿ ಇರುವವರಿದ್ದಾರೆ. ಆದರೆ ಅವರೂ ಸಹ ಕನ್ನಡ ಭಾಷೆಯನ್ನು ಮಾತನಾಡಬೇಕು. ಕನ್ನಡ ಭಾಷೆ ನಮ್ಮ ಸಾರ್ವಭೌಮ ಭಾಷೆ ಎಂದು ತಿಳಿಸಿದ್ದಾರೆ.

ಸರ್ಕಾರದಲ್ಲಿ ನಡೆಯುವ ಅಡಳಿತ ಕನ್ನಡ ಭಾಷೆಯಲ್ಲೇ ಆಗಬೇಕು. ಕೇಂದ್ರ ಸರ್ಕಾರಕ್ಕೆ ವ್ಯವಹಿಸುವಾಗ ಮಾತ್ರ ಇಂಗ್ಲಿಷ್ ಭಾಷೆ ಬಳಸಬೇಕು. ಅಡಳಿತ ಮಾಡುವಾಗ ಕನ್ನಡದಲ್ಲೇ ವ್ಯವಹರಿಸಬೇಕು. ನಮ್ಮ ಮಕ್ಕಳಿಗೆ ಯಾವ ಭಾಷೆ ಗೊತ್ತಿರುತ್ತದೆಯೋ ಅದೇ ಭಾಷೆಯಲ್ಲಿ ಕನ್ನಡ ಪರೀಕ್ಷೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...