alex Certify ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು ಹಂಚಿಕೆಗೆ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ : ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ.65 ರಷ್ಟು ಸೀಟು ಹಂಚಿಕೆಗೆ ಕ್ರಮ

ಬೆಳಗಾವಿ : ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ  ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯಕಾರ್ಯದರ್ಶಿಗಳು ಈಗಾಗಲೇ ಮಹಾರಾಷ್ಟ್ರದವರಿಗೆ ಸೂಚಿಸಿದ್ದಾರೆ.

ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು ಶೇ.65 ರಷ್ಟು ಹಾಗೂ ಇತರರಿಗೆ ಶೇ.35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ ಎಂದರು.

ಸುಮಾರು 110 ಎಕರೆ ಜಮೀನನ್ನು ಸರ್ಕಾರದ ವತಿಯಿಂದ ರಾಕ್ ಗಾರ್ಡನ್ ಮತ್ತು ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಅನುದಾನವನ್ನೂ ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನೀಡಲಾಗಿತ್ತು. ಮುಖ್ಯಮಂತ್ರಿಯಾಗಿ ಶಂಕುಸ್ಥಾಪನೆ ಮಾಡಿ, ಉದ್ಘಾಟನೆಯನ್ನೂ ಮಾಡುತ್ತಿದ್ದೇನೆ. ಎಲ್ಲವೂ ಉತ್ತಮವಾಗಿ ಮೂಡಿಬಂದಿದೆ. ರಾಯಣ್ಣ ಅವರ ಜ್ಞಾಪಕಾರ್ಥವಾಗಿ ಇಲ್ಲಿ ರಾಕ್ ಗಾರ್ಡನ್ ಮತ್ತು ವಸ್ತು ಸಂಗ್ರಹಾಲಯ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...