alex Certify ಕನ್ನಡಿಗರಿಗೆ ಸಿಹಿಸುದ್ದಿ : `HAL’ ನೇಮಕಾತಿಯಲ್ಲಿ ಮೊದಲ ಆದ್ಯತೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರಿಗೆ ಸಿಹಿಸುದ್ದಿ : `HAL’ ನೇಮಕಾತಿಯಲ್ಲಿ ಮೊದಲ ಆದ್ಯತೆ!

ತುಮಕೂರು : ಕನ್ನಡಿಗರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಹಿಸುದ್ದಿ ನೀಡಿದ್ದು, ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.

ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ದೇಶದಲ್ಲಿ ಅನೇಕ ಘಟನಾವಳಿಗಳು ನಡೆದಿವೆ. ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕು. ಸಂವಿಧಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಬೇಕು ಎಂದರು. ಸ್ಥಳೀಯ ಕನ್ನಡಿಗರಿಗೆ ಎಚ್.ಎ.ಎಲ್ ನಲ್ಲಿ ಉದ್ಯೋಗ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ರಾಜ್ಯದ 5 ರಿಂದ 11 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ.. ಈ ಬಗ್ಗೆ ಅಂಕಿ ಅಂಶ ತರಿಸಿಕೊಂಡು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುತ್ತೇವೆ . ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ, ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...