alex Certify ʻKASʼ ಪರೀಕ್ಷೆ ಬರೆಯುವವರಿಗೆ ಸಿಹಿಸುದ್ದಿ : ʻವಯೋಮಿತಿʼ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻKASʼ ಪರೀಕ್ಷೆ ಬರೆಯುವವರಿಗೆ ಸಿಹಿಸುದ್ದಿ : ʻವಯೋಮಿತಿʼ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ರಿಕ್ತ ಸ್ಥಾನಗಳನ್ನು ತುಂಬಲು  ಹೊರಡಿಸುವ ಅಧಿಸೂಚನೆಯಲ್ಲಿ ಅರ್ಹರಿರುವ ಎಲ್ಲಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರೆ ಕಾರಣದಿಂದ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗೆ ನೇಮಕಾತಿಗಾಗಿ 2021ನೇ ಸಾಲಿನಿಂದ ಪರೀಕ್ಷೆಯನ್ನು ನಡೆಸಿಲ್ಲವಾದ್ದರಿಂದ ಅನೇಕ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ನೇಮಕಾತಿಗಾಗಿ ನಿಗಧಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಮೀರಿ ಉದ್ಯೋಗದಿಂದ ವಂಚಿತರಾಗುತ್ತಿರುವ ಕಾರಣ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಗೊಳ್ಳಲಿರುವ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಹಾಜರಾಗಲು ಗರಿಷ್ಠ ವಯೋಮಿತಿಯನ್ನು ಸಡಿಲಿಸಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ.

ಮೇಲೆ ಪ್ರಸ್ತಾಪಿಸಿರುವ ಅಂಶಗಳನ್ನು ಸರ್ಕಾರವು ಪರಿಶೀಲಿಸಿ, 2023-24ನೇ ಸಾಲಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಧಿಸೂಚಿಸಲ್ಪಡುವ ಗ್ರೂಪ್-ಎ ಮತ್ತು ಗ್ರೂಪ್‌ ಬಿ ಗೆಜೆಟಡ್‌ ಪ್ರೊಬೇಷನರ್ಸ್‌ ಹುದ್ದೆಗಳು ತುಂಬಲು ಹೊರಡಿಸಿರುವ  ಅಧಿಸೂಚನೆಗೆ ಮಾತ್ರ ಅನ್ವಯವಾಗುವಂತೆ, ನಿಯಮಗಳನ್ವಯ ಅರ್ಹವಿರುವ ಎಲ್ಲ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲು ತೀರ್ಮಾನಿಸಿ, ಕೆಳಕಂಡಂತೆ ಆದೇಶಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...