ಬೆಂಗಳೂರು : ಕೆಎಎಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರದಲ್ಲೇ ಕೆಎಎಸ್ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದಿಂದ ಸುಮಾರು 200 ಕೆಎಎಸ್ / ಗೆಜೆಟೆಡ್ ಪ್ರೊಬೇಷನರಿ ಆಫೀಸರ್ಗಳ ಹುದ್ದೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಹುದ್ದೆಗಳಿಗೆ ಮುಂದಿನ ಡಿಸೆಂಬರ್ ವೇಳೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ.200 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.
ಪ್ರಸ್ತುತ 42 ಅಸಿಸ್ಟಂಟ್ ಕಮಿಷನರ್ ಮತ್ತು 110 ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳು ಸೇರಿದಂತೆ 540 ಕ್ಕೂ ಅಧಿಕ ಹುದ್ದೆಗಳು ಖಾಲಿಯಿದ್ದು, . ಶೀಘ್ರದಲ್ಲೇ ಕೆಎಎಸ್ / ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ.
ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು: ರಾಜ್ಯದ ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 31 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಣೆ ಮಾಡಿದೆ.
ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಗಳಲ್ಲಿ ಖಾಲಿ ಇರುವ ಮಿಕ್ಕುಳಿದ, ವೃಂದ, ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಮೊದಲು ಜು. 22 ಅರ್ಜಿ ಸಲ್ಲಿಕೆಗೆ ಕೊನೆಯ ದಿನವೆಂದು ನಿಗದಿ ಮಾಡಲಾಗಿತ್ತು. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ 31ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿದೆ. ಶುಲ್ಕ ಪಾವತಿಗೆ ಆಗಸ್ಟ್ 3ರ ಮಧ್ಯಾಹ್ನ 3:30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ