ಬೆಂಗಳೂರು : ಕೆಎಸ್ ಆರ್ ಟಿಸಿ ಸೇರಿ ನಾಲ್ಕು ನಿಗಮದ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿಭತ್ಯೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಆಇ 19 ಎಸ್‌ಆರ್‌ಪಿ 2023, ಬೆಂಗಳೂರು ದಿನಾಂಕ 21.10.2023 ರಲ್ಲಿ ಸರ್ಕಾರಿ ನೌಕರರಿಗೆ ದಿನಾಂಕ 01.07.2023 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.35 ರಿಂದ ಶೇ.38.75 ಕ್ಕೆ ಹೆಚ್ಚಿಸಿ ಆದೇಶಿಸಿರುತ್ತದೆ.
ಮಾನ್ಯ ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ರಾಜ್ಯ ಸಾರಿಗೆ ನಿಗಮಗಳಲ್ಲಿ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಆದೇಶಿಸಿರುವ ಪ್ರಯುಕ್ತ ಕೆಳಕಂಡಂತೆ ಕ್ರಮ ಜರುಗಿಸುವುದು.
- ನಾಲ್ಕೂಸಾರಿಗೆನಿಗಮಗಳಲ್ಲಿ ನವಂಬರ್-2023 ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸುವುದು. 86.35 ರಿಂದ Be.38.75 ಕೈ ಹೆಚ್ಚಿಸಿ
- ಕರಾರಸಾನಿಗಮದಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಜುಲೈ-2023 ರಿಂದ ಅಕ್ಟೋಬರ್-2023 ರವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಕುರಿತು ಪ್ರತ್ಯೇಕವಾಗಿ ಆದೇಶಿಸಲಾಗುವುದು.
- ಸಹೋದರಸಂಸ್ಥೆಗಳಾದಬೆಂಮನಸಾ/ವಾಕರಸಾ/ಕಕರಸಾ ಸಂಸ್ಥೆಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸುವುದು. ಸುತ್ತೋಲೆ ತಲುಪಿದ್ದಕ್ಕೆ ಸ್ವೀಕೃತಿ ಕಳುಹಿಸುವುದು