alex Certify ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಬೆಂಗಳೂರು ನಗರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ -2, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ , ಭೂ ಒಡೆತನ ಯೋಜನೆಯಡಿ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂಮಿಯನ್ನು ಒದಗಿಸುವ ಸಲುವಾಗಿ ಬೆಂಗಳೂರು ನಗರ ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಸಫಾಯಿ ಕರ್ಮಚಾರಿಗಳು / ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಾಗಿರಬೇಕು ಹಾಗೂ ಅವರ ಅವಲಂಬಿತ ಕುಟುಂಬದವರಾಗಿರಬೇಕು ಮತ್ತು ಕಳೆದ ಕನಿಷ್ಠ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ 21 ರಿಂದ 50 ವರ್ಷ ಮೇಲ್ಪಟ್ಟವರಾಗಿಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ. 3.00.000/- ಹಾಗೂ ನಗರ ಪ್ರದೇಶವಾದಲ್ಲಿ ರೂ.5.00.00/- ಮಿತಿಯೊಳಗಿರಬೇಕು. ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.

ನಗರಸಭೆ/ಪುರಸಭೆ/ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಾಗಿ/ಗುತ್ತಿಗಿ/ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕೃತ ಅಧಿಕಾರಿಗಳಿಂದ ಸೂಕ್ತ ದಾಖಲೆಗಳು/ಗುರುತಿನ ಚೀಟಿ, ಸಫಾಯಿ ಕರ್ಮಚಾರಿಗಳು/ಪೌರಕಾರ್ಮಿಕರು ವೃತ್ತಿಯಲ್ಲಿ ಕನಿಷ್ಠ 5 ವರ್ಷಗಳವರೆಗೆ ಕಾರ್ಯನಿರ್ವಹಿಸಿರುವ ಬಗ್ಗೆ ಪ್ರಮಾಣ ಪತ್ರ, ಆರ್.ಡಿ. ನಂಬರ್ ಹೊಂದಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ/ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ, ಅರ್ಜಿದಾರರ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್ ಪ್ರತಿ, ಇಚ್ಛಿಸುವ ಯೋಜನೆಗಳ ಯೋಜನಾ ವರದಿ ಹಾಗೂ ವಾಹನದ ಪರವಾನಗಿ ದಾಖಲಾತಿಗಳನ್ನು ಸಲ್ಲಿಸಬೇಕು.

ಆಸ್ತಕ ಅಭ್ಯರ್ಥಿಗಳು ಅರ್ಜಿಗಳನ್ನು ಜಾಲತಾಣ: www.https://sevasindhu.karnataka.gov.in ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್, ಇವುಗಳ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನಾಂಕವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಜಿಲ್ಲಾ ಅಧಿಕಾರಿಗಳು, ಬೆಂಗಳೂರು ವಿಭಾಗ ಸೈರಾಬಾಗ್ ಕಟ್ಟಡ #19/4, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-29550603 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...