alex Certify ಮಡಿವಾಳ ಸಮುದಾಯದಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡಿವಾಳ ಸಮುದಾಯದಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಮಡಿವಾಳ ಸಮುದಾಯಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.3 ಕೊನೆಯ ದಿನಾಂಕವಾಗಿದೆ.

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ) ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ) ಹಾಗೂ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ / ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಆಸಕ್ತರು ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ನವೆಂಬರ್ 03ರೊಳಗೆ ಸಲ್ಲಿಸಬಹುದು. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ123/1037, 1ನೇ ಮಹಡಿ, 20ನೇ ಮುಖ್ಯರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ ಬೆಂಗಳೂರು-10 ಅಥವಾ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 080-23156006 ಗೆ ಸಂಪರ್ಕಿಸಬಹುದು. ಯೋಜನೆಗಳ ಮಾರ್ಗಸೂಚಿಗಳು ಸಲ್ಲಿಸಬೇಕಾದ ದಾಖಲೆಗಳು ಹಾಗೂ ಹೆಚ್ಚಿನ ವಿವರಗಳಿಗಾಗಿ ನಿಗಮದ ವೆಬ್ ಸೈಟ್ https://kmmd.karnataka.gov.in ಗೆ ಭೇಟಿ ನೀಡಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)ದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...