alex Certify ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಡುಪಿ :ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ (ನಿ)ದ ವತಿಯಿಂದ  ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು  ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ನಡಿ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ನವೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ  ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374832, 8050770004 ಅಥವಾ 8050770005 ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...