alex Certify ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡಿವಾಳ ಮಾಚಿದೇವ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ನೀರಾವರಿ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳ ಸೌಲಭ್ಯ ಪಡೆಯಲಯ ಅರ್ಜಿ ಸಲ್ಲಿಸಬಹುದು.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು  ಪೋರ್ಟಲ್  ಮೂಲಕ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://kmmd.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/ 8050770004/ 8050770005 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...